ಉಡುಪಿ: ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ; ಪ್ರಕರಣ ದಾಖಲು

Update: 2023-09-06 15:08 GMT

ಉಡುಪಿ, ಸೆ.6: ಓಎಲ್‌ಎಕ್ಸ್‌ನಲ್ಲಿ ಮನೆ ಬಾಡಿಗೆ ಪಡೆಯುವುದಾಗಿ ನಂಬಿಸಿದ ವ್ಯಕ್ತಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಬ್ರಹ್ಮಗಿರಿಯ ಸತೀಶ್ ಭದ್ರ ಶ್ರೀಯಾನ್ ಎಂಬವರು ತನ್ನ ಮನೆ ಬಾಡಿಗೆಗೆ ಇದೆ ಎಂಬುದಾಗಿ ಓಎಲ್‌ಎಕ್ಸ್‌ನಲ್ಲಿ ಅಪ್‌ಲೋಡ್ ಮಾಡಿದ್ದು, ಸೆ.1ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿ, ಬಾಡಿಗೆ ಮನೆ ಬಗ್ಗೆ ವಿಚಾರಿಸಿ ತಾನು ಬಾಡಿಗೆಗೆ ಬರುವುದಾಗಿ ತಿಳಿಸಿದರು.

ಸತೀಶ್ ಅವರಲ್ಲಿ ಆನ್‌ಲೈನ್ ಬ್ಯಾಂಕಿಂಗ್ ನಿರ್ವಹಣೆ ಮಾಡಲು ತಿಳಿಸಿದ ವ್ಯಕ್ತಿ, ಹಣ ವರ್ಗಾವಣೆ ಮಾಡುವುದಾಗಿ ನಂಬಿಸಿದನು. ನಂತರ ಸತೀಶ್ ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 3,65,776ರೂ. ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವುದಾಗಿ ದೂರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News