ಉಡುಪಿ: ಬಟ್ಟೆಯಂಗಡಿಯಲ್ಲಿ ಮಿಸ್ ಫೈರಿಂಗ್; ಓರ್ವನಿಗೆ ಗಾಯ

Update: 2023-12-30 09:47 GMT

Photo: freepik

ಉಡುಪಿ, ಡಿ.30: ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ನಲ್ಲಿ ಇಂದು ಮಧ್ಯಾಹ್ನ ವೇಳೆ ಮಿಸ್ ಫೈರಿಂಗ್ ಆಗಿದ್ದು, ಇದರಿಂದ ಓರ್ವ ಸಿಬ್ಬಂದಿ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿದ್ದು, ಅದನ್ನು ಎತ್ತಿಕೊಂಡ ಸಿಬ್ಬಂದಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಗನ್ನಿಂದ ಗುಂಡು ಹಾರಿತ್ತೆನ್ನಲಾಗಿದೆ. ಇದರ ಪರಿಣಾಮ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿತು ಎಂದು ತಿಳಿದುಬಂದಿದೆ.

ಗಾಯಾಳುವನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಉಡುಪಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News