ಉಡುಪಿ: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ

Update: 2024-12-10 15:16 GMT

ಲಕ್ಕವ್ವ, ಅಪೂರ್ವ, ಶ್ರೇಯಾ, ಮನೋಜ್

ಉಡುಪಿ, ಡಿ.10: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್‌ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆ ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ಅವರೊಂದಿಗೆ ಡಿಸೆಂಬರ್ 4ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

ಕಾಣೆಯಾದವರ ಚಹರೆ: ಲಕ್ಷ್ಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮ್ಹಾಣಿ ಭಾಷೆ ಮಾತನಾಡುತ್ತಾರೆ. ಅಪೂರ್ವ 3 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ, ಶ್ರೇಯಾ 3 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ.

ಮನೋಜ್ 2 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News