ಉಡುಪಿ: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Update: 2025-01-16 13:46 GMT

ಸಾಂದರ್ಭಿಕ ಚಿತ್ರ

ಉಡುಪಿ, ಜ.16: ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ಕುಟುಂಬದ ಸದಸ್ಯರ ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಹೆಸರು ತೆಗೆಯುವ ಬಗ್ಗೆ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜನವರಿ 31ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News