ಉಡುಪಿ: ನ.15-17ರವರೆಗೆ ವಿದ್ಯುತ್ ವ್ಯತ್ಯಯ

Update: 2023-11-13 14:16 GMT

ಉಡುಪಿ, ನ.13: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣ ದಿಂದ ನವೆಂಬರ್ 15ರಿಂದ 17ರವರೆಗೆ ಈ ಕೆಳ ಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್ ಏರಿಯಾ ಮತ್ತು ಇಂದ್ರಾಳಿ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಶಿವಳ್ಳಿ ಕೈಗಾರಿಕಾ ಪ್ರದೇಶ, ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 15ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110/33/11 ಕೆವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಬನ್ನಂಜೆ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿ ಕೊಂಡಿರುವುದರಿಂದ ಅಜ್ಜರಕಾಡು, ಎಲ್‌ಐಸಿ, ಜೋಡುಕಟ್ಟೆ, ಟಿಎಂಎ ಪೈ ಆಸ್ಪತ್ರೆ, ಖಜಾನೆ, ತಾಲೂಕು ಪಂಚಾಯತ್, ಮಿಷನ್ ಕಂಪೌಂಡ್ 1ನೇ ಮುಖ್ಯ ರಸ್ತೆ, ಮಂಜುನಾಥ ಪೆಟ್ರೋಲ್ ಪಂಪ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕೊಕ್ಕರ್ಣೆ ಫೀಡರ್ ಮಾರ್ಗದಲ್ಲಿ ಹೆಚ್.ಟಿ/ಎಲ್.ಟಿ ಮಾರ್ಗ ಕಾಮಗಾರಿ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದ ರಿಂದ ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 16 ರಂದು ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿ ನಲ್ಲಿ ವ್ಯತ್ಯಯ ವಾಗುತ್ತದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನ.17ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News