ಉಡುಪಿ: ವಿಶ್ವಕರ್ಮ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ

Update: 2024-09-05 14:23 GMT

ಉಡುಪಿ, ಸೆ.5: ವಿಶ್ವ ಕರ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಜಿಲ್ಲಾ ಮಟ್ಟದಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಸೂಚನೆ ನೀಡಿದ್ದಾರೆ.

ಗುರುವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಿಲ್ಲಾ ಮಟ್ಟದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಕುರಿತ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸೆ.17ರಂದು ಬೆಳಗ್ಗೆ 10:30ಕ್ಕೆ ವಿಶ್ವಕರ್ಮ ಜಯಂತಿ ಕಾರ್ಯಕ್ರಮವು ಉಡುಪಿಯ ಕುಂಜಿಬೆಟ್ಟುವಿನ ಗಾಯತ್ರಿ ಕಲ್ಯಾಣ ಮಂಟಪದ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ನಡೆಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶ್ವಕರ್ಮ ಜಯಂತಿ ಕುರಿತು ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು ಎಂದ ಅವರು, ಶಿಷ್ಟಾಚಾರ ದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೂ, ಗಣ್ಯರಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಜಿಲ್ಲಾ ವಿಶ್ವಕರ್ಮ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News