ಉಡುಪಿ: ಡಿಎಆರ್ ಹೆಡ್‌ಕಾನ್‌ಸ್ಟೇಬಲ್ ಶಂಕರ್‌ಗೆ ರಾಷ್ಟ್ರಪತಿ ಪದಕ

Update: 2023-08-14 16:15 GMT

ಶಂಕರ್

ಉಡುಪಿ, ಆ.14: ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಘಟಕದ ಹೆಡ್‌ಕಾನ್‌ಸ್ಟೇಬಲ್ ಶಂಕರ್ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆ ಯಾಗಿದ್ದಾರೆ.

ಸುಬ್ಬಯ್ಯ ಪೂಜಾರಿ ಮತ್ತು ಮುಕಾಂಬು ಇವರ ಪುತ್ರನಾಗಿದ್ದು, ಮೂಲತಃ ಬೈಂದೂರು ತಾಲೂಕು ಬಿಜೂರು ಗ್ರಾಮದ ಕಾಡಿನತಾರಿನವರು. 1999ನೇ ಇಸವಿಯಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಘಟಕದಲ್ಲಿ ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು.

ನಂತರ ಇಲಾಖೆ ವತಿಯಿಂದ ಪಿಡಿಎಂಎಸ್ ವಾಹನ ಚಾಲನಾ ತರಬೇತಿ ಯನ್ನು ಬೆಂಗಳೂರಿನಲ್ಲಿ ಪಡೆದು ಪ್ರಸ್ತುತ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಪಡೆದಿದ್ದಾರೆ.

ಜಿಲ್ಲಾ ಪೊಲೀಸ್ ವಿಶೇಷ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ನಕ್ಸಲ್ ಕೂಂಬಿಂಗನಲ್ಲೂ ಭಾಗವಹಿಸಿದ್ದಾರೆ. ಪ್ರಸ್ತುತ ಡಿ.ಎ.ಆರ್. ಘಟಕದಲ್ಲಿ ಗಣ್ಯ ವ್ಯಕ್ತಿಗಳ ಬೆಂಗಾವಲು ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಇವರು 2020ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಪದಕವನ್ನು ಪಡೆದಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News