ಉಡುಪಿ: ಸೆ.13ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ
Update: 2023-09-12 13:07 GMT
ಉಡುಪಿ, ಸೆ.12: ಉಡುಪಿ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಸೆ.13 ರಂದು ಬೆಳಿಗ್ಗೆ 11 ಗಂಟೆಯಿಂದ ಕುಂದಾಪುರ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.
ಈ ಸಭೆಯಲ್ಲಿ ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ದೂರು ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಪೊಲೀಸ್ ಉಪ ಅಧೀಕ್ಷಕರ ಕಚೇರಿ: 0820- 2958881, 9364062581, ಪೊಲೀಸ್ ನಿರೀಕ್ಷಕರು-2 0820- 2536661, 9364062696 ಸಂಖ್ಯೆಗಳನ್ನು ಸಂಪರ್ಕಿಸುವಂತೆ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.