ಉಡುಪಿ: ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ಲಭ್ಯ

Update: 2023-10-26 15:44 GMT

ಸಾಂದರ್ಭಿಕ ಚಿತ್ರ

ಉಡುಪಿ, ಅ.26: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸ.ನಂ. 180, 157, 189ರ 11.90 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 4ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸ.ನಂ. 174, 56ರ 5.70 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 6ರಲ್ಲಿ ಮರಳನ್ನು ಸಾರ್ವಜನಿಕರಿಗೆ ಹಾಗೂ ಸರಕಾರಿ ಕಾಮಗಾರಿಗಳಿಗೆ ಸ್ಯಾಂಡ್ ಆ್ಯಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ.

ಸಾರ್ವಜನಿಕರು ಸದರಿ ಮರಳನ್ನು - UDUPI E-SAND APP- ಮೂಲಕ ಬುಕ್ಕಿಂಗ್ ಮಾಡಿಕೊಂಡು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820- 2572333, 2950088 ಹಾಗೂ ಉಡುಪಿ ಇ-ಸ್ಯಾಂಡ್ ಆ್ಯಪ್ ದೂ. ಸಂಖ್ಯೆ: 6364024555, 6366745888 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News