ಉಡುಪಿ: ಮಹಿಳೆಯರೇ ನಡೆಸುವ ಸಂಜೀವಿನಿ ಸೂಪರ್ ಮಾರ್ಕೆಟ್!

Update: 2023-08-13 15:04 GMT

ಉಡುಪಿ, ಆ.13: ಮಹಿಳಾ ಸಬಲೀಕರಣದ ಮೂಲಕ ಕುಟುಂಬದ ಆರ್ಥಿಕ ಬೆಳವಣಿಗೆಯ ಉದ್ದೇಶದಿಂದ ಜಾರಿಗೆ ತಂದಿ ರುವ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಜಿಲ್ಲೆಯ ಮಹಿಳೆಯರು ಆರ್ಥಿಕ ಲಾಭ ತರುವ ಹಲವು ಉದ್ಯಮಗಳಲ್ಲಿ ತೊಡಗಿದ್ದು, ಇದೇ ಮೊದಲ ಬಾರಿಗೆ ಉಡುಪಿಯಲ್ಲಿ ಎಲ್ಲಾ ಸೇವೆಗಳನ್ನು ಒದಗಿಸುವ ಸೂಪರ್ ಮಾರ್ಕೆಟ್ ಆರಂಭಗೊಳ್ಳುತ್ತಿದೆ.

ಈ ಸೂಪರ್ ಮಾರ್ಕೆಟ್‌ನಲ್ಲಿ ಸಂಜೀವಿನಿ ಮಹಿಳಾ ಸ್ವ ಸಹಾಯ ಸಂಘದ ಉತ್ತಮ ಗುಣಮಟ್ಟದ ಅಲಂಕಾರಿಕ/ಒಳಾಂಗಣ ಗಿಡಗಳು, ಯಕ್ಷಗಾನ ಮುಖವಾಡಗಳು ಹ್ಯಾಂಡ್ ಮೇಡ್ ಬ್ಯಾಗ್‌ಗಳು, ಕ್ಯಾಂಡಲ್‌ಗಳು, ಬಿದಿರಿನ ಬುಟ್ಟಿ, ಗ್ರೌನ್ ಬ್ಯಾಗ್, ವಾಲ್ ಪೈಟಿಂಗ್, ಕೀ ಚೈನ್, ಜಿಐ ಟ್ಯಾಗ್ ಹೊಂದಿರುವ ಕೈ ಮಗ್ಗದ ಸೀರೆಗಳು, ಮಣ್ಣಿನ ಮಡಕೆ ಇತ್ಯಾದಿ, ಡೋರ್ ಮ್ಯಾಟ್, ಪರಿಶುದ್ಧ ಜೇನುತುಪ್ಪ, ಕಜೆ ಅಕ್ಕಿ, ಸಾವಯವ ಬೆಲ್ಲ, ಫಿನೈಲ್, ಸೋಪ್ ಆಯಿಲ್, ಡಿಟಜೆರ್ಂಟ್, ದೇಸಿ ಗೋ ಉತ್ಪನ್ನಗಳು ಲಭ್ಯ ಇವೆ.

ಅದೇ ರೀತಿ ವಿವಿಧ ಬಗೆಯ ತಿಂಡಿ, ತಿನಿಸುಗಳು, ಪೂಜಾ ಸಾಮಗ್ರಿ, ಆರೋಗ್ಯಕರ ಪೇಯಗಳು, ಗುಣಮಟ್ಟದ ಮತ್ತು ಆರೋಗ್ಯಕರ ಸಾವಯವ ಉತ್ಪನ್ನಗಳು, ಹೋಮ್‌ಮೇಡ್ ಚಾಕಲೇಟ್, ಕೇಕ್, ಚಿಕ್ಕಿ, ಆಕರ್ಷಕ ಕಲಾ ಕೃತಿಗಳು ಸೇರಿ ದಂತೆ ಎಲ್ಲ ರೀತಿಯ ಅಗತ್ಯ ಹಾಗೂ ಅಲಂಕಾರಿಕ ವಸ್ತುಗಳು ಒಂದೇ ಸೂರಿನಡಿ ಗ್ರಾಹಕರಿಗೆ ದೊರೆಯಲಿವೆ.

ಈ ಮಳಿಗೆಯನ್ನು ಉಡುಪಿ ತಾಲೂಕು ಪಂಚಾಯತ್ ಹಾಗೂ ನರ್ಬಾಡ್ ಸಂಸ್ಥೆಯ ಸಹಯೋಗದಲ್ಲಿ ಚೇರ್ಕಾಡಿ ಗ್ರಾಪಂ ನ ಪ್ರಗತಿ ಜಿಪಿಎಲ್‌ಎಫ್‌ನ ಸಮೃದ್ಧಿ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯರು ನಡೆಸಲಿದ್ದು, ಜಿಲ್ಲೆಯ ವಿವಿಧ ಸಂಜೀವಿನಿ ಸಂಘದ ಸದಸ್ಯರು ಉತ್ಪಾದಿಸಿರುವ ವಸ್ತುಗಳನ್ನು ಈ ಕೇಂದ್ರದ ಮೂಲಕ ಮಾರಾಟ ಮಾಡಲಿದ್ದಾರೆ.

ಈ ಸೂಪರ್ ಮಾರ್ಕೆಟ್‌ನಲ್ಲಿ, ಸೇವಾ ಸಿಂಧು ಸೇವೆಗಳು, ಪಾಸ್ ಪೋರ್ಟ್, ಪಾನ್‌ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಕಾರ್ಮಿ ಕರ ನೋಂದಣಿ ಇತ್ಯಾದಿ ಆನ್‌ಲೈನ್ ಸೇವೆಗಳು, ಶಿಕ್ಷಣ, ಬ್ಯೂಟಿಷಿಯನ್, ಟೈಲರಿಂಗ್, ಎಂಬ್ರಾಯಿಡರಿ, ಕುಚ್ಚು ಮೆಹಂದಿ, ಚಂಡೆ, ಯಕ್ಷಗಾನ, ಕ್ಯಾಟರಿಂಗ್, ಕಾನೂನು ಮತುತಿ ಆಪ್ತ ಸಲಹೆ, ಕ್ಯಾಟರಿಂಗ್, ಪೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ, ಆರೋಗ್ಯ ಸಲಹೆ ಸೇವೆಗಳೂ ಕೂಡ ದೊರೆಯಲಿವೆ.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಜಿಲ್ಲೆಯಲ್ಲಿ 155 ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಮೂಲಕ ಒಟ್ಟು 7623 ಸ್ವ ಸಹಾಯ ಗುಂಪುಗಳನ್ನು ರಚಿಸಲಾಗಿದ್ದು, ಈ ಗುಂಪುಗಳಲ್ಲಿ 85000 ಅಧಿಕ ಮಂದಿ ಸದಸ್ಯರಿದ್ದು, ಜಿಲ್ಲೆಯ ಗ್ರಾಮೀಣ ಭಾಗದ ಮಹಿಳೆಯರು ಸಮುದಾಯ ಬಂಡವಾಳ ನಿಧಿಯನ್ನು ಪಡೆದು ಅನೇಕ ರೀತಿಯ ಜೀವನೋಪಾಯ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ ಎಂದು ಅಭಿಯಾನದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಜಿಲ್ಲೆಯ ಸಂಜಿವಿನಿ ಸ್ವಸಹಾಯ ಸಂಘದ ಮಹಿಳೆಯರಿಗೆ, ಜಿಪಂ ಮೂಲಕ ಸ್ವ ಉದ್ಯೋಗ ಆರಂಭಿಸಲು ಅಗತ್ಯವಿರುವ ತರಬೇತಿ ಮತ್ತು ಸಮುದಾಯ ಬಂಡವಾಳವನ್ನು ನೀಡುತ್ತಿದ್ದು, ಇದರಿಂದ ಈಗಾಗಲೇ ಹಲವು ರೀತಿಯ ಆರ್ಥಿಕ ಚಟುವ ಟಿಕೆಗಳನ್ನು ಕೈಗೊಂಡಿದ್ದಾರೆ. ಅವರು ತಯಾರಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರೆತಲ್ಲಿ ಇನ್ನೂ ಹೆಚ್ಚಿನ ಆರ್ಥಿಕ ಲಾಭ ಗಳಿಸಬಹುದಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರೇ ತಮ್ಮ ಉತ್ಪನ್ನಗಳ ಮಾರಾಟಕ್ಕೆ ಸೂಪರ್ ಮಾರ್ಕೆಟ್ ತೆರೆಯುತ್ತಿರುವುದು ಅವರ ಆರ್ಥಿಕ ಬೆಳವಣಗೆಗೆ ಮತ್ತಷ್ಟು ಸಹಕಾರವಾಗಲಿದೆ’

-ಪ್ರಸನ್ನ ಎಚ್., ಸಿಇಓ, ಜಿಪಂ ಉಡುಪಿ

ಆ.14ರಂದು ಸೂಪರ್ ಮಾರ್ಕೆಟ್ ಉದ್ಘಾಟನೆ

ಸಂಜೀವಿನಿ ಸೂಪರ್ ಮಾರ್ಕೆಟ್ ಉಡುಪಿಯ ಹೃದಯಭಾಗದ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಆರಂಭಗೊಳ್ಳಲಿದ್ದು, ಆ.14ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿ ಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ.

ಸಂಜೀವಿನಿ ಆಹಾರೋತ್ಸವ

ಉಡುಪಿ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಆ.14ರಂದು ನಡೆಯಲಿರುವ ಸಂಜೀವಿನಿ ಆಹಾರೋತ್ಸವದಲ್ಲಿ ವಿವಿಧ ಬಗೆಯ ಆಹಾರ ತಿನಿಸುಗಳ ಜೊತೆಗೆ ಆಷಾಡ ಮಾಸದ(ಆಟಿ) ತಿಂಡಿಗಳೂ ಸಹ ದೊರೆಯಲಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಆಹಾರ ಮೇಳದ ಪ್ರಯೋಜನ ಪಡೆಯುವಂತೆ ಜಿಪಂ ಸಿಇಓ ತಿಳಿಸಿದ್ದಾರೆ.




 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News