ಉಡುಪಿ: ಮಠ, ಮಸೀದಿ, ಚರ್ಚ್ ಗೆ ಭೇಟಿ ನೀಡಿದ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್

Update: 2024-02-06 09:58 GMT

ಉಡುಪಿ, ಫೆ.6: ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಅಅವರು ಮಂಗಳವಾರ ಉಡುಪಿ ಶ್ರೀಕೃಷ್ಣ ಮಠ, ಜಾಮೀಯ ಮಸೀದಿ ಹಾಗೂ ಶೋಕ ಮಾತಾ ಇಗರ್ಜಿಗೆ ಭೇಟಿ ನೀಡಿದರು.

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವರು, ಶ್ರೀಕೃಷ್ಣ ದೇವರ ದರ್ಶನ ಪಡೆದು, ನಂತರ ಗೀತಾಮಂದಿರದಲ್ಲಿ ಪರ್ಯಾಯ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿ ಪರ್ಯಾಯ ಯೋಜನೆ ಬಗ್ಗೆ ತಿಳಿಸಿ, ಸಚಿವರಿಗೆ ಭಗವದ್ಗೀತೆ ಪುಸ್ತಕವನ್ನು ನೀಡಿ ಹರಸಿದರು.

ಈ ಸಂದರ್ಭದಲ್ಲಿ ಪುತ್ತಿಗೆ ಕಿರಿಯ ಯತಿ ಶ್ರೀಸುಶ್ರೀಂದ್ರ ತೀರ್ಥ ಸ್ವಾಮೀಜಿ, ಪ್ರಸನ್ನ ಆಚಾರ್ಯ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಎಂ.ಎ.ಗಫೂರ್ ಹಾಜರಿದ್ದರು.

ಸಚಿವರು ಉಡುಪಿ ಜಾಮೀಯ ಮಸೀದಿಗೆ ಭೇಟಿ ನೀಡಿದ  ಸಂದರ್ಭ ಮಸೀದಿಯ ಖತೀಬ್ ಮೌಲಾನ ಅಬ್ದುರ್ರಶೀದ್ ನದ್ವಿ ದುವಾ ನೆರವೇರಿಸಿದರು. ಮಸೀದಿ ಅಧ್ಯಕ್ಷ ರಿಯಾಝ್ ಅಹ್ಮದ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮುಖಂಡರಾದ ಎಂ.ಎ.ಗಫೂರ್, ಹಬೀಬ್ ಅಲಿ, ಅಶೋಕ್ ಕುಮಾರ್ ಕೊಡವೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು ಮೊದಲಾದವರು ಉಪಸ್ಥಿತರಿದ್ದರು.

ಉಡುಪಿ ಬಿಷಪ್ ಹೌಸ್ ಮತ್ತು ಶೋಕ ಮಾತಾ ದೇವಾಲಯಕ್ಕೆ  ಸಚಿವರು  ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಉಡುಪಿ ಧರ್ಮಾಧ್ಯಕ್ಷರ ಅನುಪಸ್ಥಿತಿಯಲ್ಲಿ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಸಚಿವರನ್ನು ಧರ್ಮಪ್ರಾಂತ್ಯದ ಪರವಾಗಿ ಗೌರವಿಸಿದರು.

ಈ ವೇಳೆ ಸಚಿವರು ಧರ್ಮಪ್ರಾಂತ್ಯ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡರಲ್ಲದೆ ಹಾಗೂ ಕ್ರೈಸ್ತ ಸಮುದಾಯದ ಅಭಿವೃಧ್ದಿಗೆ ಸರಕಾರದ ಯೋಜನೆಗಳನ್ನು ಉಪಯೋಗಿಸಿಕೊಳ್ಳುವಂತೆ ಸೂಚಿಸಿದರು.

ಈ ವೇಳೆ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ.ಡೆನಿಸ್ ಡೆಸಾ, ಮಣಿಪಾಲ ಕ್ರೈಸ್ಟ್ ಚರ್ಚಿನ ಧರ್ಮಗುರು ವಂ.ರೋಮಿಯೊ ಲೂವಿಸ್, ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ನಿರ್ದೇಶಕ ವಂ.ಆಲ್ಬನ್ ಡಿಸೋಜಾ, ತರಬೇತಿ ನಿರತ ಗುರು ವಂ ಸ್ಟೀಫನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಅಶೋಕ್ ಕುಮಾರ್ ಕೊಡವೂರು, ಎಂ.ಎ.ಗಫೂರ್ ಉಪಸ್ಥಿತರಿದ್ದರು.









 


 


 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News