ಉಡುಪಿ: ಕಾನೂನು ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

Update: 2023-08-08 15:44 GMT

ಉಡುಪಿ, ಆ.8: ವಕೀಲ ವೃತ್ತಿ ಯಶಸ್ಸಿಗೆ ಬದ್ದತೆ, ಶಿಸ್ತು ಮತ್ತು ನಿಖರ ವಾದ ಗುರಿ ಮುಖ್ಯ ಎಂದು ಉಡುಪಿಯ ಹಿರಿಯ ವಕೀಲರಾದ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದ್ದಾರೆ.

ಉಡುಪಿಯ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ 64ನೇ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾ ಡುತಿದ್ದರು. ವಕೀಲರಿಗೆ ಕಾನೂನು ವಿಷಯದ ಮೇಲೆ ಉತ್ತಮ ಹಿಡಿತ ವಿರಬೇಕು ಹಾಗೂ ಆಸಕ್ತಿ ಇರಬೇಕು. ಕಾನೂನು ವೃತ್ತಿ ಅತ್ಯಂತ ಶ್ರೇಷ್ಟವಾದ ವೃತ್ತಿಯಾಗಿದೆ ಎಂದು ಹೇಳಿದರು.

ಕಾಲೇಜಿನ ನಿರ್ದೇಶಕರಾದ ಪ್ರೊ.(ಡಾ.) ನಿರ್ಮಲಾ ಕುಮಾರಿ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ರಘುನಾಥ್ ಕೆ.ಎಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪರವಾಗಿ ವಿವಿಧ ಕಾಲೇಜುಗಳಲ್ಲಿ ಅಣಕು ನ್ಯಾಯಾಲಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಕಾಲೇಜಿನಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳಾದ ಪ್ರಜಾಪತಿ ಗೌತಮಿ ಸ್ವಾಗತಿಸಿ ಅವಿನಾಶ್ ಕೆ. ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News