ಮೊಬೈಲ್ ಕಡಿಮೆ ಬಳಸಿ, ಗ್ರಂಥಾಲಯದಲ್ಲಿ ಸಮಯ ವ್ಯಯಿಸಿ: ರಾಯಪ್ಪ

Update: 2023-11-07 15:04 GMT

ಉಡುಪಿ, ನ.7: ಉಡುಪಿ ನಗರ ಕೇಂದ್ರ ಗ್ರಂಥಾಲಯದ ಶಾಖೆ ಕವಿ ಮುದ್ದಣ ಮಾರ್ಗ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹದ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಮತ್ತು ವಿವಿಧ ಸ್ಪರ್ಧೆಗಳನ್ನು ನ.7ರಂದು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ನಗರಸಭೆಯ ಪೌರಾಯುಕ್ತ ರಾಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಬಿಡು ವಿನ ಸಮಯದಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆ ಬಳಸಿ, ಅತೀ ಹೆಚ್ಚು ಸಮಯವನ್ನು ಗ್ರಂಥಾಲಯದಲ್ಲಿ ವ್ಯಯಿಸ ಬೇಕು. ಆ ಮೂಲಕ ಗತ ಕಾಲದ ಇತಿಹಾಸ, ವಿಜ್ಙಾನ, ಆತ್ಮಚರಿತ್ರೆ, ಸಾಹಿತ್ಯ ಭೂಮಂಡಲಕ್ಕೆ ಸಂಬಂಧಿಸಿದ ಉತ್ತಮ ಪುಸ್ತಕಗಳನ್ನು ಓದಿ ತಮ್ಮ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಇದು ತಮಗೆ ಸ್ಪರ್ಧಾತ್ಮಕ ಪರೀಕ್ಷೆ ಯನ್ನು ಎದುರಿಸುವಲ್ಲಿ ತುಂಬಾ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಉಡುಪಿ ಜಿಲ್ಲಾಡಳಿತದ ವತಿಯಿಂದ ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ನಗರ ಸಭೆಯ ಸಭಾಂಗಣದಲ್ಲಿ ತರಬೇತಿಯನ್ನು ಆಯೋಜಿಸಲಾಗಿದ್ದು ಪ್ರತೀ ದಿನ ಸಮಯ ಸಂಜೆ 5.30ರಿಂದ 7.30ರವರೆಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವರ್ಚುವಲ್ ತರಬೇತಿಯನ್ನು ನಡೆಸಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳ ಬೇಕು ಎಂದು ಅವರು ಕರೆ ನೀಡಿದರು.

ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ ದರು. ಗ್ರಂಥಪಾಲಕ ಸಿ.ರಂಜಿತ. ಕಾರ್ಯಕ್ರಮ ನಿರೂಪಿಸಿದರು. ಕವಿ ಮುದ್ದಣ ಮಾರ್ಗ ಗ್ರಂಥಾಲಯ ಸಹಾಯಕ ಸುನೀತಾ ಬಿ.ಎಸ್. ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News