ಸರಕಾರಿ ಇಲಾಖೆಗಳ ನಾಮಫಲಕಗಳಲ್ಲಿ ಕನ್ನಡ ಬಳಕೆ ಕಡ್ಡಾಯ: ಉಡುಪಿ ಡಿಸಿ ವಿದ್ಯಾಕುಮಾರಿ

Update: 2024-09-10 15:45 GMT

ಉಡುಪಿ, ಸೆ.10: ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.

ಆದ್ದರಿಂದ ಸರಕಾರದ ಎಲ್ಲಾ ಇಲಾಖೆಗಳಲ್ಲಿ, ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು.

ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇ.60ರಷ್ಟು ನಾಮಫಲಕದ ಮೇಲ್ಭಾಗದಲ್ಲಿರುವಂತೆ ಹಾಗೂ ಶೇ. 40ರಷ್ಟು ಅಂಗ್ಲಭಾಷೆಯಲ್ಲಿ ಪ್ರದರ್ಶಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News