ಉಡುಪಿ ಜಿಲ್ಲಾಸ್ಪತ್ರೆಗೆ ಲಕ್ಷಾಂತರ ರೂ. ಮೌಲ್ಯದ ಔಷಧಿ ಹಸ್ತಾಂತರ

Update: 2024-08-15 13:00 GMT

ಉಡುಪಿ, ಆ.15: ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಯ ಅರ್ಹ ರೋಗಿಗಳಿಗೆ ಲಕ್ಷಾಂತರ ರೂ. ಮೌಲ್ಯದ ಔಷಧಿ ಹಸ್ತಾಂತರ ಮಾಡಲಾಯಿತು.

ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್ ಮಾತನಾಡಿ, ನಮ್ಮ ಬೇಡಿಕೆಗೆ ಸಂಘಟನೆ ಸ್ಪಂದಿಸಿ ಅಗತ್ಯವಿದ್ದ ಔಷಧಿ, ಕಂಪ್ಯೂಟರ್ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ. ಅವರ ಕಾರ್ಯ ಶ್ಲಾಘನೀಯವಾಗಿದ್ದು ಇದೇ ರೀತಿಯ ಸಹಕಾರ ಸದಾ ಇರಲಿ ಎಂದು ಆಶಯ ವ್ಯಕ್ತಪಡಿಸಿದರು.

ಇದ್ರೀಸ್ ಹೂಡೆ ಮಾತನಾಡಿ, ಸಂಘಟನೆಯು ಸದಾ ಕಾಲ ಸಂಕಷ್ಟದಲ್ಲಿ ರುವವರಿಗೆ ಮಿಡಿಯುವ ಕೆಲಸ ನಡೆಸುತ್ತ ಬಂದಿದೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ರೇಷನ್ ಕಿಟ್ ವಿತರಣೆ, ಅಂತ್ಯ ಸಂಸ್ಕಾರ ಸೇರಿದಂತೆ ಸಾಧ್ಯವಾದ ಎಲ್ಲ ನೆರವನ್ನು ನಮ್ಮ ಕಾರ್ಯಕರ್ತರು ಮಾಡಿದ್ದರು. ಕೇರಳದ ವಯನಾಡಿನಲ್ಲಿ ನಡೆದ ಭೂಕುಸಿತದ ಸಂದರ್ಭದಲ್ಲೂ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಅರ್ಹ ರೋಗಿಗಳಿಗೆ ಬೇಕಾದ ಔಷಧವನ್ನು ಜಿಲ್ಲಾಸ್ಪತ್ರೆಗೆ ಒದಗಿಸುವ ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಝೀಝ್ ಉದ್ಯಾವರ, ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ಶಾಖೆಯ ಅಧ್ಯಕ್ಷ ನಿಸಾರ್ ಉಪ್ಪಿನ ಕೋಟೆ, ಡಾ.ನಿಖಿನ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ನಿತ್ಯನಂದ ಒಳಕಾಡು, ಅಝೀಝ್ ಉದ್ಯಾವರ, ಉದ್ಯಮಿ ಮುಹಮ್ಮದ್ ಸೀರಾಜ್, ಪ್ರೊ.ಅಬ್ದುಲ್ ಅಝೀಝ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News