ಕಾರ್ಕಳ: ಬೆಂಕಿ ಹಚ್ಚಿಕೊಂಡು ವಿಕಲಚೇತನ ಮಹಿಳೆ ಆತ್ಮಹತ್ಯೆ

Update: 2024-05-19 17:52 GMT

ಕಾರ್ಕಳ: ಬೋಳ ಎಂಬಲ್ಲಿ ಮೈಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿಕಲಚೇತನ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಬೋಳ ಪಂಚಾಯತ್ ಕಛೇರಿ ಬಳಿಯ ನಿವಾಸಿ ಶರ್ಮಿಳಾ (36) ಎಂದು ಗುರುತಿಸಲಾಗಿದೆ. ವಿಕಲಚೇತನರಾಗಿರುವ ಇವರು, ಸುಮಾರು 13 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಅವರು ಮೇ 3ರಂದು ಮನೆಯಲ್ಲಿ  ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ತೀವ್ರವಾಗಿ ಸುಟ್ಟ ಗಾಯಗೊಂಡಿದ್ದ ಇವರು, ಮೇ 19ರಂದು ಬೆಳಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News