ಕುಂದಾಪುರ ಪ್ರೌಢಶಾಲೆಗಳಲ್ಲಿ ಯಕ್ಷ ಶಿಕ್ಷಣ: ಸಮಾಲೋಚನಾ ಸಭೆ

Update: 2023-07-23 12:53 GMT

ಕುಂದಾಪುರ, ಜು.23: ಕುಂದಾಪುರ ವಿಧಾನಸಭಾ ವ್ಯಾಪ್ತಿಯ 9 ಪ್ರೌಢಶಾಲೆ ಗಳಲ್ಲಿ ಯಕ್ಷ ಶಿಕ್ಷಣವನ್ನು ಆರಂಭಿಸುವ ನಿಟ್ಟಿನಲ್ಲಿ ಶಾಸಕ ಕಿರಣ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಇಂದು ಅವರ ಕಛೇರಿಯಲ್ಲಿ ಸಮಾಲೋಚನ ಸಭೆ ನಡೆಸ ಲಾಯಿತು.

ಸರಕಾರಿ ಪ್ರೌಢಶಾಲೆಗಳಾದ ಕುಂದಾಪುರ, ಕೋಟೇಶ್ವರ, ಕೋಡಿಕನ್ಯಾನ, ಮಣೂರು, ಗುಂಡ್ಮಿ, ತೆಕ್ಕಟ್ಟೆ, ಬೀಜಾಡಿ, ಬಸ್ರೂರು ಹಾಗೂ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆ ಕೋಟೇಶ್ವರ ಇಲ್ಲಿ ಈ ಬಾರಿ ಯಕ್ಷಗಾನ ತರಬೇತಿಯನ್ನು ಆರಂಭಿಸಿ ಡಿಸೆಂಬರ್ ತಿಂಗಳಲ್ಲಿ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸುವ ಕುರಿತು ತೀರ್ಮಾನಿಸಲಾಯಿತು.

ಯಕ್ಷಶಿಕ್ಷಣದ ರೂಪುರೇಷೆಗಳ ಸಮಗ್ರ ಮಾಹಿತಿಯನ್ನು ಕಾರ್ಯದರ್ಶಿ ಮುರಲಿ ಕಡೆಕಾರ್ ನೀಡಿದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಗುರುಗಳಾದ ಪ್ರಸಾದ್ ಮೊಗೆಬೆಟ್ಟು, ನರಸಿಂಹ ತುಂಗ, ಮಂಜುನಾಥ ಕುಲಾಲ, ವಿಷ್ಣುಮೂರ್ತಿ ಬೇಳೂರು, ನವೀನ ಕೋಟ ಹಾಗೂ ದೇವದಾಸ ಮರವಂತೆ, ರಾಹುಲ್ ಪಾಲ್ಗೊಂಡಿದ್ದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ರಾದ ಎಸ್.ವಿ.ಭಟ್, ವಿ.ಜಿ.ಶೆಟ್ಟಿ, ಗಣೇಶ್ ಬ್ರಹ್ಮಾವರ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News