ಭಟ್ಕಳ: ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ 20 ಮಂದಿಯ ವಿರುದ್ಧ ಪ್ರಕರಣ ದಾಖಲು

Update: 2024-03-05 14:16 GMT

ಅನಂತ್ ಕುಮಾರ್ ಹೆಗಡೆ

ಭಟ್ಕಳ: ತೆಂಗಿನಗುಂಡಿ ಸುಮುದ್ರ ತೀರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಹಾಗೂ ಮಾಜಿ ಶಾಸಕ ಸುನಿಲ್ ನಾಯ್ಕ ಕಾನೂನು ಬಾಹಿರವಾಗಿ ಸಾರ್ವಕರ್ ಕಟ್ಟೆಯಲ್ಲಿ ಹನುಮ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ಹಾಗೂ ಇತರ 20 ಮಂದಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 153A ಅನ್ವಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜನಕ್ಕಾಗಿ ಐಪಿಸಿ 153A ದಂಡ ವಿಧಿಸುತ್ತದೆ. ಇದು ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ, ಜಾತಿ ಅಥವಾ ಸಮುದಾಯದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುವುದನ್ನು ಒಳಗೊಂಡಿರುತ್ತದೆ. ಇದು ವಿವಿಧ ಗುಂಪುಗಳ ನಡುವಿನ ಸಾಮರಸ್ಯದ ನಿರ್ವಹಣೆಗೆ ಪೂರ್ವಾಗ್ರಹ ಪಡಿಸುವ ಕೃತ್ಯಗಳನ್ನು ಸಹ ಒಳಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News