ಭಟ್ಕಳ: ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಬಾವಿಗೆ ಬಿದ್ದು ಮೃತ್ಯು

Update: 2024-12-18 16:56 GMT

ಭಟ್ಕಳ: ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೋರ್ವ ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಭಟ್ಕಳದಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ಗಾಣದಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯ ನಿರುಪಾದಿ ದುರ್ಗಪ್ಪ ಹರಿಜನ (14) ಎಂದು ಗುರುತಿಸಲಾಗಿದೆ.

ತಾಲೂಕು ಪಂಚಾಯತ್ ಕಚೇರಿ ಎದುರಿನ ಔಷಧಿ ಅಂಗಡಿಗೆ ಬಂದಿದ್ದ ವಿದ್ಯಾರ್ಥಿ ಮೂತ್ರ ವಿಸರ್ಜನೆಗೆಂದು ಹೋದಾಗ, ಬಾವಿಗೆ ಬಿದ್ದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳೀಯರು ಮತ್ತು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ ಬಾಲಕನನ್ನು ತಕ್ಷಣವೇ ಬಾವಿಯಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಪ್ರವಾಸದ ವಿವರ: ಗಾಣದಾಳ ಶಾಲೆಯ 100 ವಿದ್ಯಾರ್ಥಿಗಳು ಮತ್ತು 13 ಶಿಕ್ಷಕರ ತಂಡ ಜೋಗ ಫಾಲ್ಸ್, ಕೊಲ್ಲೂರು ಹಾಗೂ ಇತರ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಎರಡು ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದರು. ನಿನ್ನೆ ರಾತ್ರಿ ಗಾಣದಾಳ ದಿಂದ ಹೊರಟಿದ್ದ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಜೋಗ ಜಲಪಾತ ವೀಕ್ಷಿಸಿ, ಕೊಲ್ಲೂರಿಗೆ ಅರಬೈಲ್ ಘಟ್ಟದ ಮಾರ್ಗ ವಾಗಿ ತೆರಳುತ್ತಿದ್ದರು. ಮಾರ್ಗ ಮಧ್ಯೆ, ಭಟ್ಕಳದಲ್ಲಿ ಗುಳಿಗೆ ಖರೀದಿಸಲು ವಾಹನ ನಿಲ್ಲಿಸಲಾಗಿತ್ತು.

ಔಷಧಿ ಅಂಗಡಿಯ ಹಿಂದೆ ಇರುವ ಜಾಗದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ವಿದ್ಯಾರ್ಥಿ ತಡೆಗೋಡೆ ಇಲ್ಲದ ತೆರೆದ ಬಾವಿಯನ್ನು ಗಮನಿಸದೆ ಬಿದ್ದಿದ್ದಾನೆ. ತಕ್ಷಣ ಸ್ಪಂದಿಸಿದ ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ಕೈಗೊಂಡರೂ, ಬಾಲಕನ ಪ್ರಾಣವನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.

ಪ್ರವಾದಲ್ಲಿದ್ದ ಇತರ ವಿದ್ಯಾರ್ಥಿಗಳಿಗೆ ಭಟ್ಕಳದಲ್ಲಿ ಉಳಿದುಕೊಳ್ಳಲು ತಾಲೂಕಾಡಳಿತ ಸೂಕ್ತ ವ್ಯವಸ್ಥೆ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News