ಭಟ್ಕಳ: ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಮೇಶ ಶೆಟ್ಟಿಗೆ ಮುಖ್ಯಮಂತ್ರಿ ಚಿನ್ನದ ಪದಕ
Update: 2023-07-02 06:18 GMT
ಭಟ್ಕಳ, ಜು.2: ಅಗ್ನಿಶಾಮಕ ದಳದ ಭಟ್ಕಳ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಮೇಶ ಶೆಟ್ಟಿ ಪ್ರಸಕ್ತ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಮೂಲತಃ ಉಡುಪಿಯವರಾಗಿರುವ ರಮೇಶ ಶೆಟ್ಟಿ, 1992ರಲ್ಲಿ ಅಗ್ನಿಶಾಮಕ ದಳ ಸೇರಿ, ಬೆಂಗಳೂರಿನಲ್ಲಿ ತರಬೇತಿ ಮುಗಿಸಿದ್ದರು. ಬಳಿಕ ಬೆಳಗಾವಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ ಪದನ್ನೋತಿ ಹೊಂದಿ ಕದ್ರಿ-ಮಂಗಳೂರು, ಶಿವಮೊಗ್ಗ, ಮಲ್ಪೆ ಅಗ್ನಿಶಾಮಕ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2016ರಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ವರ್ಗಾವಣೆಗೊಂಡು ಸದ್ಯ ಭಟ್ಕಳ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.