76 ವರ್ಷಗಳಲ್ಲಿ ದೇಶ ಗಣನೀಯ ಸಾಧನೆ ಮಾಡಿದೆ: ಸಹಾಯಕ ಆಯುಕ್ತೆ ಡಾ.ನಯನಾ
ಭಟ್ಕಳ: ಇಲ್ಲಿನ ತಾಲೂಕು ಕ್ರಿಡಾಂಗಣದಲ್ಲಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ ಮೂಲಕ ರಾಷ್ಟ್ರ ದ್ವಜಾರೋಹಣ ದೊಂದಿಗೆ ತಾಲೂಕಾಡಳಿತ ಮತ್ತು ಸಾರ್ವಜನಿಕರು ದೇಶದ 77ನೇ ಸ್ವಾತಂತ್ರ್ಯ ಸಂಭ್ರವನ್ನು ಆಚರಿಸಿಕೊಂಡರು.
ದ್ವಜರೋಹಣ ನೆರವೇರಿಸಿ ಮಾತನಾಡಿದ ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ.ನಯನಾ, ದೇಶವು 76 ವರ್ಷಗಳಲ್ಲಿ ಗಣನೀಯ ಸಾಧನೆ ಮಾಡಿದೆ. ವಿಜ್ಞಾನ ತಂತ್ರಜ್ಞಾನ ಸೇರಿದಂತೆ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಅಭಿವೃದ್ಧಿಯನ್ನು ಸಾಧಿಸಿದೆ ಎಂದ ಅವರು “ಚಂದ್ರಯಾನ-3” ಈ ದೇಶದ ಹೆಮ್ಮೆ ಇಂತಹ ಸಾಧನೆಗೈದ ಜಗತ್ತಿನ 4ನೇ ರಾಷ್ಟ್ರ ಎಂಬ ಕೀರ್ತಿಗೆ ನಾವು ಪಾತ್ರರಾಗಿದ್ದೇವೆ ಎಂದರು.
ಭಟ್ಕಳ ತಹಸಿಲ್ದಾರ್ ತಿಪ್ಪಿಸ್ವಾಮಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೋಗೆರ್ ಧನ್ಯವಾದ ಅರ್ಪಿಸಿದರು. ಡಿ.ವೈ.ಎಸ್.ಪಿ ಶ್ರೀಕಾಂತ್ ಕೆ., ಪುರಸಭೆ ಮುಖ್ಯಾಧಿಕಾರಿ ಸುರೇಶ್ ಎನ್.ಕೆ., ತಾ.ಪಂ. ಕಾರ್ಯನಿರ್ವಾಣಾಧಿಕಾರಿ ಪ್ರಭಾಕರ್ ಚಿಕ್ಕನಮನೆ, ಜಾಲಿ ಪ.ಪಂ ಮುಖ್ಯಾಧಿಕಾರಿ ಮಂಜಪ್ಪ ಎನ್., ಭಟ್ಕಳ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಮ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಕನ್ನಡ, ಇಂಗ್ಲಿಷ್, ಉರ್ದು ಭಾಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ಗಳಿಗೆ ಹಾಗೂ ಐವರು ಮಾಜಿ ಸೈನಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಆಕರ್ಷಕ ಪಥಸಂಚಲನ ಮಾಡಿದ ಉತ್ತಮ ತಂಡಗಳಿಗೆ, ನಗರದಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಿದ ಹೆಸ್ಕಾಂ ಸಿಬ್ಬಂಧಿಗಳಿಗೆ ಹಾಗೂ ಭಾಷಣ ಮತ್ತು ಪೋಸ್ಟರ್ ತಯಾರಿ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.