ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ನಾಳೆ (ಜು.15) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Update: 2024-07-14 16:20 GMT

ಸಾಂದರ್ಭಿಕ ಚಿತ್ರ 

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜು.16 ರವರೆಗೆ ರೆಡ್‌ ಅಲೆರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜು.15 (ಸೋಮವಾರ) ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆಯ ಸಲುವಾಗಿ ಜು.15ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ,ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕಿನಾದ್ಯಂತ, ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜು(12ನೇ ತರಗತಿವರೆಗೆ)ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News