ಹೊನ್ನಾವರ: ರಸ್ತೆ ಅಪಘಾತ; ಬೈಕ್ ಸವಾರ ಮೃತ್ಯು

Update: 2024-05-26 10:20 GMT

ಹೊನ್ನಾವರ: ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊನ್ನಾವರ ತಾಲೂಕಿನ ಹಳದಿಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಶಂಕರ ಹೆಗಡೆ (55) ಎಂದು ಗುರುತಿಸಲಾಗಿದೆ. ಏಕಮುಖ ರಸ್ತೆಯಲ್ಲಿ ಬೈಕ್ ಚಲಾಯಿಸಲು ಯತ್ನಿಸುತ್ತಿದ್ದಾಗ ಹೊನ್ನಾವರದಿಂದ ಕುಮಟಾ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ಗೆ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಶಂಕರ್ ಅವರ ತಲೆಗೆ ಗಂಭೀರವಾಗಿ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಹೊನಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News