ಕಾರವಾರ: ಆಟವಾಡುತ್ತಿದ್ದ 3 ವರ್ಷದ ಮಗು ಬಾವಿಗೆ ಬಿದ್ದು ಮೃತ್ಯು

Update: 2023-08-26 12:02 GMT

ಕಾರವಾರ: ಆಟವಾಡುತ್ತಿದ್ದ 3 ವರ್ಷದ ಮಗು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ಹರಿದೇವ ನಗರದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಸೂರಜ್ ಬಂಟ್ ಎಂಬವರ ಪುತ್ರಿ ಸ್ತುತಿ (3) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ಮಗು ಆಟವಾಡುತ್ತಾ ಸಾರ್ವಜನಿಕ ಬಾವಿ ಹತ್ತಿರ ಹೋಗಿದ್ದು, ಈ ವೇಳೆ ಆಯಾ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ನಗರಸಭೆಯಿಂದ ತೆಗೆದ ಸಾರ್ವಜನಿಕ ಬಾವಿ ರಸ್ತೆ ಪಕ್ಕದಲ್ಲೇ ಇದ್ದು ಇದಕ್ಕೆ ಕಟ್ಟಿದ ಕಟ್ಟೆ ತುಂಬಾ ಕೆಳಮಟ್ಟದ್ದಾಗಿದ್ದು ಬಾವಿ ಕಟ್ಟೆಯನ್ನು ಎತ್ತರ ಕಟ್ಟದೇ ಇರುವುದೇ ಘಟನೆಗೆ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News