ಕಾರವಾರ: ಟಗ್ ಬೋಟ್ ನಲ್ಲಿ ಆಕಸ್ಮಿಕ ಬೆಂಕಿ; ಅಪಾರ ಹಾನಿ

Karwar: Accidental fire on tug boat; Huge damage

Update: 2023-08-10 10:52 GMT

ಕಾರವಾರ: ಅರ್ಗಾದ ಐಎನ್ಎಸ್ ಕದಂಬ ನೌಕಾನೆಲೆಯ ಡಾಕ್ ಯಾರ್ಡ್ ನಲ್ಲಿದ್ದ ಟಗ್ ಬೋಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ವರದಿಯಾಗಿದೆ.

ಟಗ್ ಬೋಟ್ ನ ಎಂಜಿನ್ ನಲ್ಲಿನ ತಾಂತ್ರಿಕ ದೋಷದಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎನ್ನಲಾಗುತ್ತಿದ್ದು, ಹೊಗೆ ಕಾಣಿಸಿಕೊಂಡ ತಕ್ಷಣವೇ ನೌಕಾದಳದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News