ಕಾರವಾರ: ಶಾಲೆಯಲ್ಲಿ ವಿದ್ಯುತ್ ವಯರ್ ತಗುಲಿ ವಿದ್ಯಾರ್ಥಿನಿ ಮೃತ್ಯು

Update: 2024-11-28 12:37 GMT

ಸಾಂದರ್ಭಿಕ ಚಿತ್ರ

ಕಾರವಾರ: ವಿದ್ಯುತ್ ವಯರ್ ತಗುಲಿ ವಿದ್ಯಾರ್ಥಿನಿಯೋರ್ವಳು ಶಾಲೆಯಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮುಂಡವಾಡಾ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ.

ಎರಡನೇ ತರಗತಿಯ ಸಾನ್ವಿ ಗೌಳಿ (8) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಈಕೆ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ತುಂಡಾಗಿದ್ದ ವಿದ್ಯುತ್ ಸರ್ವಿಸ್ ವಯರ್ ತಗುಲಿದೆ. ಇದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಶಾಲೆಯಲ್ಲಿ ಬೋರ್ ವೆಲ್ ಅಳವಡಿಸಲು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯಲಾಗಿತ್ತು ಎಂದು ದೂರಲಾಗಿದೆ. ಈ ವಯರ್ ಶಾಲೆಯ ಶೌಚಾಲಯದ ಒಳಗೆ ಬಿದ್ದಿತ್ತು. ವಿಶ್ರಾಂತಿ ವೇಳೆ ಸಾನ್ವಿ ಮೂತ್ರ ವಿಸರ್ಜನೆಗೆಂದು ಶೌಚಾಲಯಕ್ಕೆ ತೆರಳಿದ್ದಳು. ಹೆಸ್ಕಾಂ ಹಾಗೂ ಶಾಲೆಯ ಮುಖ್ಯ ಶಿಕ್ಷಕರ ಸಂಪೂರ್ಣ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಪ್ರವೀಣ ಹುಚ್ಚಣ್ಣನರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News