ಕಾರವಾರ | ಕಾಳಿ ಹಳೆ ಸೇತುವೆ ಕುಸಿತ ಹಿನ್ನೆಲೆ: ಕಾಳಿ ಹೊಸ ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Update: 2024-08-07 08:31 GMT

ಗೋವಾ - ಕಾರವಾರವನ್ನು ಸಂಪರ್ಕಿಸುವ ಕಾಳಿನದಿ ಹಳೆ ಸೇತುವೆ ಮಂಗಳವಾರ ತಡರಾತ್ರಿ ಕುಸಿದುಬಿದ್ದಿದೆ.

ಉತ್ತರ ಕನ್ನಡ, ಆ.7: ರಾಷ್ಟ್ರೀಯ ಹೆದ್ದಾರಿ 66ರ ಕಾರವಾರ-ಸದಾಶಿವಗಡ ಸಂಪರ್ಕಿಸುವ ಹಳೆಯ ಕಾಳಿ ಸೇತುವೆ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ಕಾಳಿ ಹೊಸ ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕಾಳಿ ಹೊಸ ಸೇತುವೆಯ ಮೇಲೆ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಗೋವಾ - ಕಾರವಾರವನ್ನು ಸಂಪರ್ಕಿಸುವ ಕಾಳಿನದಿ ಸೇತುವೆ ಮಂಗಳವಾರ ತಡರಾತ್ರಿ ಕುಸಿದುಬಿದ್ದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News