ಕುಂದಾಪುರ: ಬೈಕ್‌‌ ಗೆ ಲಾರಿ ಢಿಕ್ಕಿ; ಸವಾರ ಮೃತ್ಯು

Update: 2024-02-18 08:13 GMT

ಕುಂದಾಪುರ: ಬೈಕ್‌‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ‌ ಮೃತಪಟ್ಟ ಘಟನೆ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಅರಾಟೆ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಮಹಾರಾಷ್ಟ್ರದ ನವಿ ಮುಂಬೈ ನಿವಾಸಿ ರಾಹುಲ್ ಬಾಲಕೃಷ್ಣ ರಣಕಂಬೆ ಎಂದು ಗುರುತಿಸಲಾಗಿದೆ. ಮರವಂತೆ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಇವರು ಬ್ಯಾಂಕ್ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅತೀ ವೇಗದಿಂದ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಗಂಭೀರ ಗಾಯಗೊಂಡಿದ್ದ ರಾಹುಲ್ ಅವರನ್ನು ಗಂಗೊಳ್ಳಿಯ 24*7 ಆಪದ್ಬಾಂಧವ ಅಂಬುಲೆನ್ಸ್ ನ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ  ಕುಂದಾಪುರದ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ  ದಾರಿ ಮಧ್ಯೆ ರಾಹುಲ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಅಪಘಾತ ನಡೆಸಿದ ಚಾಲಕ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಸ್ಥಳೀಯರು ಲಾರಿಯನ್ನು ಬೆನ್ನಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಂಗೊಳ್ಳಿ ಠಾಣೆ ಎಸ್‌ಐ ಹರೀಶ್‌ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News