ಉತ್ತರ ಕನ್ನಡ| ಕಾಂಗ್ರೆಸ್‌ ಚುನಾವಣಾ ಪ್ರಚಾರಕ್ಕೆ ಮಾಜಿ ಸಚಿವ ರಮಾನಾಥ ರೈ

Update: 2024-04-29 18:11 GMT

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರ ಪರ ಪ್ರಚಾರ ನಡೆಸಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರಿಗೆ ಮೇ 7ರಂದು ನಡೆಯಲಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಲ್ಕರ್ ಪರ ಪ್ರಚಾರಕ್ಕೆ ಶ್ರಮಿಸಲು ಕೆಪಿಸಿಸಿ ಜವಾಬ್ದಾರಿಯನ್ನು ವಹಿಸಿಕೊಟ್ಟಿದೆ.

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯನ್ನು ಎಲ್ಲರ ಜೊತೆ ಸೇರಿಕೊಂಡು ಅಚ್ಚುಕಟ್ಟಾಗಿ ನಡೆಸಿರುವಿರಿ ಎಂದು ರೈ ಅವರನ್ನು ಶ್ಲಾಘಿಸಿ, ಕೆಪಿಸಿಸಿ ಪರವಾಗಿ ಅಭಿನಂದನೆ ಸಲ್ಲಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ (ಆಡಳಿತ) ಜಿ.ಸಿ. ಚಂದ್ರಶೇಖರ್ ಅವರು ಮುಂದೆ ಉತ್ತರ ಕನ್ನಡ ಕ್ಷೇತ್ರದಾದ್ಯಂತ ಸಂಚರಿಸಿ ಪ್ರಚಾರ ಕೈಗೊಂಡು, ಅಪಾರ ರಾಜಕೀಯ ಅನುಭವ ಮತ್ತು ಚುನಾವಣಾ ತಂತ್ರಗಾರಿಕೆಯನ್ನು ಧಾರೆಯರೆದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News