ಕಾರವಾರ: ನದಿಯಲ್ಲಿ ಮುಳುಗಿ ತಾಯಿ, ಮಗಳು ಮೃತ್ಯು

Update: 2024-05-01 12:16 GMT

ಕಾರವಾರ: ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ತಾಯಿ, ಮಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರವಾರ ತಾಲೂಕಿನ ಬೈತಖೋಲ್ ಗ್ರಾಮದಲ್ಲಿ ಬುಧವಾರ ನಡೆದಿದೆ.

ಬೈತಖೋಲದ ರೇಣುಕಾ ಹಾಗೂ ಸುಜಾತ ಮೃತ ತಾಯಿ - ಮಗಳಾಗಿದ್ದಾರೆ.

ಇಂದು ಬೆಳಗ್ಗೆ ಕಾಳಿ ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದಾಗ ಈ‌ ದುರ್ಘಟನೆ ಸಂಭವಿಸಿದೆ. ಮೃತದೇಹಗಳನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಪತ್ತೆಹಚ್ಚಿ ದಡಕ್ಕೆ ತಂದಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News