ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Update: 2024-05-03 12:25 GMT

ಕುಮಟಾ: ಸಚಿವ ಮಂಕಾಳ ವೈದ್ಯರು, ನಮ್ಮ ಅಭ್ಯರ್ಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲೇಬೇಕೆಂಬ ಸಂಕಲ್ಪ ಮಾಡಿದ್ದಾರೆ. ಪ್ರಣಾಳಿಕೆಯಲ್ಲೂ ಹೇಳಿದ್ದೇವೆ, ಕುಮಟಾದಲ್ಲಿ ಆಸ್ಪತ್ರೆ ಮಾಡೇ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಿಸಿದರು.

ಇಲ್ಲಿ ಪ್ರಜಾಧ್ವನಿ-2 ಸಮಾವೇಶದಲ್ಲಿ ಮಾತನಾಡಿದ ಅವರು, ನಿಮ್ಮ ಸಮಸ್ಯೆಗಳನ್ನ ಅರಿತಿದ್ದೇವೆ. ಬಿಜೆಪಿಗೆ ಮತ ಹಾಕಿದ ವರಿಗೆ ತಿಳಿಸಲೇಬೇಕು, ಗ್ಯಾರಂಟಿ ಕೊಟ್ಟು ಬದುಕನ್ನು ಕಾಂಗ್ರೆಸ್ ಹಸನಾಗಿಸಿದೆ ಎಂದು. ಮಾರ್ಗರೇಟ್ ಆಳ್ವಾ ನಂತರ ಮತ್ತೊಬ್ಬ ಮಹಿಳೆಯನ್ನ ಆರಿಸಿ ಕಳಿಸುತ್ತೀರಿ ಎನ್ನುವ ನಂಬಿಕೆ ಇದೆ. ಕಾಂಗ್ರೆಸ್ ನ ಆಚಾರ ವಿಚಾರ ಪ್ರಚಾರ ಮಾಡೋಕೆ ಬಂದಿದ್ದೇವೆ. ನೀವು ಈ ಬಾರಿ ಇತಿಹಾಸ ನಿರ್ಮಿಸುತ್ತೀರಿ ಎಂಬ ನಂಬಿಕೆ ಇದೆ ಎಂದರು.

ಕೊಟ್ಟ ಮಾತನ್ನ ಬಿಜೆಪಿ ಉಳಿಸಿಕೊಂಡಿಲ್ಲ. ಜಾತಿ, ಧರ್ಮ ಒಡೆಯೋ ಕೆಲಸ ಮಾಡಿದೆ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದರು. ನಾವು ಪ್ರಜಾಧ್ವನಿ ಯಾತ್ರೆ ಪ್ರಾರಂಭ ಮಾಡಿದ್ದೇವೆ. ನಾವು ಯಾರೂ ಮೋಸ ಮಾಡಿಲ್ಲ. ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನ ಜಾತಿ ಧರ್ಮದ ಮೇಲೆ ನೀಡಿಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆ ನೀಡುತ್ತಿದ್ದೇವೆ ಎಂದು ಭರವಸೆ ನೀಡಿದರು.



 


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News