ಮಾರುಕೇರಿ: ಕೊಟ್ಟಿಗೆಯಿಂದ ಗಬ್ಬದ ದನವನ್ನು ಹೊತ್ತೊಯ್ದ ಚಿರತೆ

Update: 2024-05-24 10:18 GMT

ಭಟ್ಕಳ, ಮೇ 24: ತಾಲೂಕಿನ ಮಾರುಕೇರಿಯ ಹೂತ್ಕಳದಲ್ಲಿ ಚಿರತೆಯೊಂದು ಕೊಟ್ಟಿಗೆಯಲ್ಲಿದ್ದ ಗಬ್ಬದ ದನವೊಂದನ್ನು ಎಳೆದೊಯ್ದು ತಿಂದು ಹಾಕಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಚಿರತೆ ಹೂತ್ಕಳದ ಕೃಷ್ಣ ದುರ್ಗಪ್ಪ ನಾಯ್ಕ ಎಂಬವರ ಕೊಟ್ಟಿಗೆಯಲ್ಲಿದ್ದ ದನವನ್ನು ಚಿರತೆ ಬೇಟೆಯಾಡಿದೆ. ಇಂದು ಬೆಳಗ್ಗೆ ಕೊಟ್ಟಿಗೆಯಲ್ಲಿ ದನ ಇಲ್ಲದ್ದನ್ನು ಗಮನಿಸಿದ ಮನೆಯವರು ಹೊರಗೆ ಬಂದು ನೋಡಿದಾಗ ಯಾವುದೋ ಪ್ರಾಣಿ ದನವನ್ನು ತಿಂದು ಹಾಕಿರುವುದು ಪತ್ತೆಯಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಮಾರುಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಂ ಡಿ ನಾಯ್ಕ, ಪಶು ವೈದ್ಯಾಧಿಕಾರಿ ಶಿವಕುಮಾರ, ಗ್ರಾಪಂ ಕಾರ್ಯದರ್ಶಿ ಮತ್ತಿತರರು ಭೇಟಿ ನೀಡಿ ಪರಿಶೀಲಸಿದರು.

ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಭಾಗದಲ್ಲಿ ಚಿರತೆ ಕಾಟ ಜೋರಾಗಿದ್ದು, ರಾತ್ರಿ ವೇಳೆ ಕೊಟ್ಟಿಗೆಯಲ್ಲಿದ್ದ ದನಕರಗಳನ್ನು ಎಳೆದೊಯ್ದು ತಿನ್ನುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಹಲವು ಪ್ರಕರಣಗಳಾಗಿವೆ. ಚಿರತೆ ದಾಳಿಗೆ ಸಂಬಂಧಿಸಿದಂತೆ ದನದ ಮಾಲಿಕರಿಗೆ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ಕೊಡಬೇಕೆಂದು ಗ್ರಾಪಂ. ಉಪಾಧ್ತಕ್ಷ ಎಂ.ಡಿ. ನಾಯ್ಕ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News