ಕಾರವಾರ| ಪೊಲೀಸ್‌ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು

Update: 2024-06-15 13:00 GMT

ಕಾರವಾರ: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಿರಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಜೋಯಿಡಾ ತಾಲೂಕಿನ ರಾಮನಗರದ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ರಾಮನಗರದ ಹನುಮಾನ ಗಲ್ಲಿ ನಿವಾಸಿ ಭಾಸ್ಕರ ಬೋಂಡೆಲ್ಕರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಹಿಂದೆ ಜೂಜಾಟ ಪ್ರಕರಣ ಸಂಬಂಧ ಭಾಸ್ಕರ ಮೇಲೆ ಪ್ರಕರಣ ದಾಖಲು ಮಾಡಲಾಗಿತ್ತು. ನಂತರ ಪಿಎಸ್ಐ ಬಸವರಾಜು ನಿರಂತರವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕಾರಣದಿಂದ ಭಾಸ್ಕರ ಅವರು ಹಿರಿಯ ಅಧಿಕಾರಿಗಳಿಗೂ ದೂರು ನೀಡಿದ್ದರು ಎನ್ನಲಾಗಿದೆ.

ಈ ನಡುವೆ ಕೆಲ ದಿನಗಳ ಹಿಂದೆ ಜಮೀನು ವಿಚಾರದಲ್ಲಿ ಪೊಲೀಸರು ಭಾಸ್ಕರ ಅವರ ಮಾವ ಗಣಪತಿ ಅವರಿಗೆ ನೋಟಿಸ್ ಕೊಟ್ಟಿದ್ದರು. ಇದನ್ನು ತಿಳಿದ ಭಾಸ್ಕರ್, ನನಗೆ ಪೀಡುಸುತ್ತಿದ್ದ ಪೊಲೀಸರು ಈಗ ನನ್ನ ಮಾವನಿಗೂ ಪೀಡಿಸುತ್ತುದ್ದಾರೆಂದು ಭಾವಿಸಿ ಜೂನ್ 13 ರಂದು ಠಾಣೆಗೆ ಹೋಗಿ ನೋಟಿಸ್ ಕೊಟ್ಟಿರುವುದಕ್ಕೆ ಪ್ರಶ್ನಿಸಿದ್ದರು. ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಸೂಚಿಸಿದ್ದರು ಎನ್ನಲಾಗಿದೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದ್ದು, ನಂತರ ಭಾಸ್ಕರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಕೂಡಲೇ ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆಸ್ಪತ್ರೆಗೆ ಹೋಗುವಾಗ ವೀಡಿಯೊ ಮಾಡಿ ತನಗೆ ಪೊಲೀಸ್ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿಕೊಂಡಿದ್ದು, ಅದು ವೈರಲ್ ಆಗಿತ್ತು. ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಭಾಸ್ಕರ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News