ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪರಿಷ್ಕರಿಸಲು ಐಟಾ ಮನವಿ

Update: 2024-12-02 16:40 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಈ ವೇಳಾಪಟ್ಟಿಯನ್ನು ಸೂಕ್ತವಾಗಿ ಪರಿಷ್ಕರಿಸ ಬೇಕೆಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್ (ಐಟಾ) ಕರ್ನಾಟಕ ರಾಜ್ಯಾಧ್ಯಕ್ಷ ಎಂ.ಆರ್. ಮಾನ್ವಿ ಅವರು ಪರೀಕ್ಷಾ ಮಂಡಳಿಗೆ ಮನವಿ ಮಾಡಿದ್ದಾರೆ.

ಪ್ರಸ್ತುತ ವೇಳಾಪಟ್ಟಿಯ ಪ್ರಕಾರ, ಪರೀಕ್ಷೆಗಳು ಮಾರ್ಚ್ 24, 2025ರಿಂದ ಆರಂಭವಾಗಿ ಏಪ್ರಿಲ್ 11, 2025ರಂದು ಮುಕ್ತಾಯಗೊಳ್ಳಲಿವೆ. ಮಾರ್ಚ್ 28 ರಂದು ಇಂಗ್ಲಿಷ್ ದ್ವಿತೀಯ ಭಾಷೆಯ ಪರೀಕ್ಷೆಯನ್ನು ನಡೆಸಲು ಯೋಜನೆ ಇದೆ. ಅದೇ ದಿನ ಪವಿತ್ರ ರಮಝಾನ್ ತಿಂಗಳ ಜುಮಾತುಲ್ ವಿದಾ ಹಾಗೂ ಶಬೆ ಖದರ್ ಇರುವ ಕಾರಣ, ವಿದ್ಯಾರ್ಥಿಗಳಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ತೊಂದರೆ ಉಂಟಾಗುವ ಸಾಧ್ಯತೆಯಿದೆ.

ಎ. 4 ಮತ್ತು ಎ.11 ರಂದು ಶುಕ್ರವಾರ ದಿನದಂದು ಪರೀಕ್ಷೆಗಳು ನಡೆಯುವ ಕಾರಣ, ಸಾಮೂಹಿಕ ಶುಕ್ರವಾರದ ಪ್ರಾರ್ಥನೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ, ಪರೀಕ್ಷಾ ಮಂಡಳಿ ಹಾಗೂ ಶಿಕ್ಷಣ ಸಚಿವರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಅನುಗುಣವಾಗಿ ಅಂತಿಮ ವೇಳಾಪಟ್ಟಿಯನ್ನು ಸೂಕ್ತವಾಗಿ ಪರಿಷ್ಕರಿಸಬೇಕೆಂದು ಐಟಾ ಸರ್ಕಾರವನ್ನು ವಿನಂತಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News