ಭಟ್ಕಳ| ರಸ್ತೆ ಅಪಘಾತ: ಮಹಿಳೆ ಮೃತ್ಯು
Update: 2025-01-06 16:40 GMT
ಭಟ್ಕಳ: ಭಟ್ಕಳದ ಶಂಸುದ್ದೀನ್ ವೃತ್ತದಲ್ಲಿ ಸೋಮವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಚಿತ್ರಾಪುರ ನಿವಾಸಿ ಲಕ್ಷ್ಮೀ ಜಟ್ಟ ನಾಯ್ಕ (75) ಮೃತರು ಎಂದು ಗುರುತಿಸಲಾಗಿದೆ. ಅವರು ರಸ್ತೆ ದಾಟುವಾಗ ಖಾಸಗಿ ಬಸ್‌ವೊಂದು ಬಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಶಹರಾ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.