ಕಾರವಾರ| ಲಾರಿ ಢಿಕ್ಕಿ: ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಮೃತ್ಯು

Update: 2025-02-19 20:31 IST

ಯಲ್ಲಾಪುರ: ಕಾರವಾರ ಸಮೀಪ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಮೃತರನ್ನು ಆರ್ ವೆಂಕಟೇಶ್, ಚೈತ್ರಾ ಹಾಗೂ 4 ವರ್ಷದ ಮಗು ಶ್ರೀಹಾನ್ ಎಂದು ಗುರುತಿಸಲಾಗಿದೆ.

ವೇಗದಲ್ಲಿ ಬಂದ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದ್ದು, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಇವರು ಕೊಪ್ಪಳದಿಂದ ಪ್ರವಾಸಕ್ಕೆಂದು ಅಂಕೋಲಾ ಕಡೆಗೆ ಹೊರಟಿದ್ದರು ಎನ್ನಲಾಗಿದೆ. ವೆಂಕಟೇಶ್‌ ಅವರ ಸಹೋದರ ಶ್ರೀಕಾಂತ ಎಂಬವರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ. 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News