ಉಚಿತವಾಗಿ ಯಾವುದೇ ವಸ್ತು ನೀಡಿದರೂ ಅದು ಸಮಾಜಕ್ಕೆ ಮಾರಕ : ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ
Update: 2025-03-29 15:57 IST

ದಾಂಡೇಲಿ : ʼಉಚಿತವಾಗಿ ಯಾವುದೇ ವಸ್ತು ನೀಡಿದರೂ ಅದು ಸಮಾಜಕ್ಕೆ ಮಾರಕʼ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೆರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ʼಉಚಿತ ಕೊಡುಗೆ ಎಂಬುದು ತೀರಾ ಅಪಾಯಕಾರಿ. ಉಚಿತ ಎಂಬ ಪದವೇ ಮಾರಕ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು. ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು. ಶಕ್ತಿ ಯೋಜನೆಯಡಿ ಮಹಿಳೆಯರಿಗಷ್ಟೆ ಅಲ್ಲದೆ, ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಪ್ರಶ್ನಿಸಿದರು.