ನ.1 ರಿಂದ 7 ತಿಂಗಳು ಶಿರಸಿ-ಕುಮಟಾ ಹೆದ್ದಾರಿ ಬಂದ್

Update: 2023-10-19 18:03 GMT

ಫೈಲ್‌ ಫೋಟೊ 

ಶಿರಸಿ: ನ.1 ರಿಂದ ಮೇ ಕೊನೆಯವರೆಗೆ ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿ ಎಲ್ಲ ರೀತಿಯ ವಾಹನಗಳಿಗೆ ನಿರ್ಬಂಧಿಸಲಾಗುವುದು ಎಂದು ಶಿರಸಿ ಉಪವಿಭಾಗಾಧಿಕಾರಿ ದೇವರಾಜ್ ರ ಅಧ್ಯಕ್ಷತೆಯಲ್ಲಿ ಗುತ್ತಿಗೆದಾರ ಕಂಪನಿ ಆರ್. ಎನ್. ಎಸ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಬುಧವಾರ ಕೈಗೊಳ್ಳಲಾಗಿದೆ.

ಸೇತುವೆ ಕಾಮಗಾರಿ ಹಾಗೂ ದೇವಿಮನೆ ಘಾಟ್‌ನಲ್ಲಿ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಶಿರಸಿ ಉಪ ವಿಭಾಗ ವ್ಯಾಪ್ತಿಗೆ ಬರುವ ಶಿರಸಿ ಕುಮಟಾ ಹೆದ್ದಾರಿಯಲ್ಲಿ 33 ಕಿ.ಮಿ.ನಲ್ಲಿ 27ಕಿ.ಮಿ ರಸ್ತೆ ಕಾಮಗಾರಿ ಮುಗಿದಿದೆ. ಆದರೆ ಸಣ್ಣ ಹಾಗೂ ದೊಡ್ಡ ಸೇತುವೆಗಳು ಸೇರಿ ಒಟ್ಟು 9 ಸೇತುವೆಗಳ ಕಾಮಗಾರಿ ನಡೆಯಬೇಕಿದೆ. ಜೊತೆಗೆ ದೇವಿಮನೆ ಘಾಟ್‌ನಲ್ಲಿ ಕಾಮಗಾರಿ ನಡೆಯಬೇಕಿದೆ. ಸೇತುವೆ ಕಾಮಗಾರಿ ನಡೆಯುವ ಸಮಯದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವುದು ಕಷ್ಟಸಾಧ್ಯವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿ ದೇವರಾಜ್ ತಿಳಿಸಿದ್ದಾರೆ.

ಬಂದ್ ಆಗಲಿರುವ ಶಿರಸಿ - ಕುಮಟಾ ಹೆದ್ದಾರಿ ಸಂಪರ್ಕಿಸುವ ರಸ್ತೆಗಳಲ್ಲಿ ಈ ಬಗ್ಗೆ ಮಾಹಿತಿ ಇರುವ ಬೋರ್ಡ್ ಗಳನ್ನು ಹಾಕಿ ಜನರಿಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News