ವಿಜಯನಗರ: ಬಸ್- ಲಾರಿ ಢಿಕ್ಕಿ; ಓರ್ವ ಮೃತ್ಯು

Update: 2024-06-07 02:56 GMT

ವಿಜಯನಗರ: ಖಾಸಗಿ ಬಸ್ ಮತ್ತು ಲಾರಿ ಢಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಜಂಬಯ್ಯನ ಕೆರೆ ಬಳಿ  ಶುಕ್ರವಾರ ಮುಂಜಾನೆ ನಡೆದಿದೆ.

ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಹೊಸಪೇಟೆ ಕಡೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಢಿಕ್ಕಿಯಾಗಿದೆ.

ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News