ಫೆಬ್ರವರಿ 28ರಿಂದ ಮೂರು ದಿನ ʼಹಂಪಿ ಉತ್ಸವʼ : ಸಿದ್ಧತೆಗೆ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್‌ ಸೂಚನೆ

Update: 2025-01-02 10:50 GMT

ಬೆಂಗಳೂರು : ಈ ಬಾರಿಯ ವಿಶ್ವ ವಿಖ್ಯಾತ ʼಹಂಪಿ ಉತ್ಸವʼ ಫೆಬ್ರವರಿ 28ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಗುರುವಾರ ಬೆಳಗ್ಗೆ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮ್ಮತಿ ಪಡೆದಿದ್ದಾರೆ.

ಫೆ.28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದು, ಮಾರ್ಚ್ 1 ಮತ್ತು 2ರಂದು ಕಾರ್ಯಕ್ರಮ ಗಳು ಇರಲಿವೆ. ಮಾರ್ಚ್ 2ರಂದು ಸಮಾರೋಪ ನಡೆಯಲಿದೆ.

ಹಂಪಿ ಉತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಉಸ್ತುವಾರಿ ಸಚಿವ ಝಮೀರ್ ಅಹ್ಮದ್‌ ಖಾನ್ ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News