ಹೊಸಪೇಟೆ | ಶಾಸಕರ ಕಚೇರಿಯಲ್ಲಿ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ
Update: 2024-12-27 17:21 GMT
ಹೊಸಪೇಟೆ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ವಿಜಯನಗರದ ಶಾಸಕ ಎಚ್.ಆರ್.ಗವಿಯಪ್ಪ ಅವರ ಕಚೇರಿಯಲ್ಲಿ ಮನಮೋಹನ್ ಸಿಂಗ್ ಅವರ ಭಾವಚಿತ್ರವನ್ನಿಟ್ಟು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಎರಡು ನಿಮಿಷ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷರಾದ ಸೋಮಶೇಖರ್ ಬಣ್ಣದಮನೆ ಅವರು, ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅವರು ದೇಶಕ್ಕೆ ನೀಡಿರುವ ಕೊಡುಗೆ ಮತ್ತು ಅವರ ಆರ್ಥಿಕ ಸುಧಾರಣೆಗಳ ಬಗ್ಗೆ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಸಣ್ಣಮಾರೆಪ್ಪ, ಸೂರ್ಯನಾರಾಯಣ, ಯರಿಸ್ವಾಮಿ, ಪವನ್ ಕುಮಾರ್, ಶ್ರೀನಿವಾಸ, ಮೋಹನ್ ಕುಮಾರ್, ವಕೀಲರಾದ ಎಚ್.ಮಹೇಶ್, ಮಹಿಳಾ ಮುಖಂಡರಾದ ಲಕ್ಷ್ಮೀ ದೇವಿ ಸೇರಿ ಹಲವರು ಉಪಸ್ಥಿತರಿದ್ದರು.