ಹೊಸಪೇಟೆ | ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಖಂಡಿಸಿ ಎಬಿವಿಪಿ ಪ್ರತಿಭಟನೆ
Update: 2025-04-28 21:11 IST

ಹೊಸಪೇಟೆ : ವಿಜಯನಗರ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಮುಖ್ಯ ರಸ್ತೆಯ ಮೂಲಕ ತಾಲೂಕು ಕಚೇರಿಯವರೆಗೆ ಕಾಲ್ನಡಿಗೆಯ ಮುಖಾಂತರ ನೂರಾರು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮಾತನಾಡಿ, ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ಕೃತ್ಯವನ್ನು ಖಂಡಿಸುತ್ತೇವೆ. ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರವನ್ನು ನೀಡಬೇಕೆಂದು ವಿದ್ಯಾರ್ಥಿ ಪರಿತ್ ಆಗ್ರಹಿಸುತ್ತದೆ ಎಂದು ತಿಳಿಸಿದರು
ಭಯೋತ್ಪಾದಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವವರಿಗೆ ಹಾಗೂ ಹತ್ಯೆಗೊಳಗಾಗಿರುವವರಿಗೆ ವಿದ್ಯಾರ್ಥಿ ಫೆಡರೇಶನ್ ಸಂತಾಪವನ್ನು ಸೂಚಿಸುತ್ತದೆ ಎಂದು ಈ ವೇಳೆ ತಿಳಿಸಿದರು.