ವಿಜಯನಗರ: ಅಮಿತ್ ಶಾ ವಿರುದ್ಧ ಸಂವಿಧಾನ ಸಂರಕ್ಷಣಾ ಸಮಿತಿ ಪ್ರತಿಭಟನೆ
Update: 2024-12-21 10:14 GMT

ವಿಜಯನಗರ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರ ಬಗ್ಗೆ ಅವಹೇಳನಕಾರಿ ಹೇಳಿಕೆ ಹೇಳಿರುವ ಕೇಂದ್ರ ಗೃಹಸಚಿವ ಅಮಿತ್ ಶಾರನ್ನು ಸಚಿವ ಸಂಪುಟದಿಮದ ಕೈಬಿಡುವಂತೆ ಒತ್ತಾಯಿಸಿ ಸಂವಿಧಾನ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿಂದು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಅಮಿತ್ ಶಾ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನದಲ್ಲಿ ಉಗ್ರವಾದ ಹೋರಾಟದ ಮೂಲಕ ಎತ್ತರಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ DHS ಜಿಲ್ಲಾ ಅಧ್ಯಕ್ಷ ಮರಡಿ ಜಂಬಯ್ಯನಾಯಕ, ಬಣ್ಣದ ಮನೆಯ ಸೋಮಶೇಖರ್, ಸ್ಲಂ ಮಂಜು, ಮಾರೆಪ್ಪ, ಎಲ್ ಮಂಜುನಾಥ್, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.
