ಹೊಸಪೇಟೆ ನಗರಸಭೆ ಬಿಲ್‌ ಕಲೆಕ್ಟರ್ ಆತ್ಮಹತ್ಯೆ

Update: 2025-01-10 19:01 GMT

ಹೊಸಪೇಟೆ : ಇಲ್ಲಿನ ನಗರಸಭೆಯ ಬಿಲ್ ಕಲೆಕ್ಟರ್‌ ಲಾಡ್ಜ್‌ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮಂಜುನಾಥ್ ಅವರು ಹೊಸ ವರ್ಷದ ಆರಂಭದ ದಿನವೇ ತಮಗೆ ಕೆಲಸದ ಒತ್ತಡದ ಇದೆ ಎಂದು ಹೇಳಿ ಪ್ಲಂಬಿಂಗ್‌ಗೆ ಬಳಸುವ ಗಮ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಗೆ ದಾಖಲಿಸಿ ಚೇತರಿಸಿಕೊಂಡಿದ್ದ ಅವರು ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜನವರಿ 1ರಂದು ಅವರು ಆತ್ಮಹತ್ಯೆಗೆ ಯತ್ನಿಸುವ ಮೊದಲು ತಮ್ಮ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಈ ಬಾರಿ ಮತ್ತೆ ಡೆತ್‌ನೋಟ್‌ ಬರೆದಿಟ್ಟು ಅಥವಾ ಸಂದೇಶ ಕಳುಹಿಸಿದ್ದಾರೆಯೇ ಎಂಬ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News