ವಿಜಯನಗರ | ಮೇ.3 ರಂದು ಜಿಲ್ಲಾ ಮಟ್ಟದ 'ಜನ ಸ್ಪಂದನ' ಕಾರ್ಯಕ್ರಮ

Update: 2025-04-29 22:30 IST
ವಿಜಯನಗರ | ಮೇ.3 ರಂದು ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮ

ಎಂ.ಎಸ್.ದಿವಾಕರ್

  • whatsapp icon

ವಿಜಯನಗರ (ಹೊಸಪೇಟೆ) : ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಝಮೀರ್ ಅಹ್ಮದ್ ಖಾನ್ ಅಧ್ಯಕ್ಷತೆಯಲ್ಲಿ ಮೇ.3 ರಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾ ಮಟ್ಟದ 'ಜನ ಸ್ಪಂದನ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಚುನಾಯಿತ ಪ್ರತಿನಿಧಿಗಳ ಮತ್ತು ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು. ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.

ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಆಹವಾಲುಗಳೊಂದಿಗೆ ಜನಸ್ಪಂದನಾ ಸಭೆಯಲ್ಲಿ ಭಾಗವಹಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News