ವಿಜಯನಗರ | ಹೆಚ್ಚಿದ ತಾಪಮಾನ : ಮುಂಜಾಗೃತ ಕ್ರಮಗಳನ್ನು ಪಾಲಿಸಲು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡಮನಿ ಸೂಚನೆ

ವಿಜಯನಗರ(ಹೊಸಪೇಟೆ) : ಬಿಸಿಲು, ಬಿಸಿಗಾಳಿ ತಾಪಕ್ಕೆ ಕಾರ್ಮಿಕರು ಹೈರಾಣಾಗದಂತೆ ಮುಂಜಾಗೃತ ಕ್ರಮಗಳನ್ನು ಪಾಲಿಸುವ ಮೂಲಕ ಆರೋಗ್ಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡಮನಿ ಹೇಳಿದರು.
ಹೊಸಪೇಟೆ ತಾಲೂಕಿನ ವ್ಯಾಸನಕೆರೆಯಲ್ಲಿ ಹೂಳು ತೆಗೆಯುವ ನರೇಗಾ ಕೂಲಿಕಾರ್ಮಿಕರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಏರ್ಪಡಿಸಿದ್ದ ʼಉಚಿತ ಆರೋಗ್ಯ ತಪಾಸಣಾ ಶಿಬಿರʼದಲ್ಲಿ ಭಾಗವಹಿಸಿ ಗುರುವಾರ ಅವರು ಮಾತನಾಡಿದರು.
ತಾಲೂಕಿನ ಮಲಪನಗುಡಿ, ಸೀತಾರಾಮ್‌ತಾಂಡ, ಕಲ್ಲಹಳ್ಳಿ, ನಾಗೇನಹಳ್ಳಿ, ಹೊಸೂರು ಗ್ರಾಪಂನ ಸುಮಾರು 2,500 ಕ್ಕೂ ಹೆಚ್ಚು ನರೇಗಾ ಕೂಲಿ ಕಾರ್ಮಿಕರು ಚಿಕಿತ್ಸೆ ಪಡೆದರು.
ಈ ವೇಳೆ ಮರಿಯಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಧಾಕೃಷ್ಣ, ಜಿಲ್ಲಾ ಅರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಧನಲಕ್ಷ್ಮೀ, ಆರೋಗ್ಯ ನಿರೀಕ್ಷಣಾಧಿಕಾರಿ ನಾರಾಯಣ, ಸಮುದಾಯ ಆರೋಗ್ಯ ಅಧಿಕಾರಿ ಭರತ, ರೇಣುಕಾ, ಜಿಪಂನ ಐಇಸಿ ಸಂಯೋಜಕ ನಾಗರಾಜ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.