ವಿಜಯನಗರ | ಕುಂ.ವೀರಭದ್ರಪ್ಪ, ನ್ಯಾ.ಶಿವರಾಜ್ ಪಾಟೀಲ್, ವೆಂಕಟೇಶ್ ಕುಮಾರ್ ಅವರಿಗೆ ʼನಾಡೋಜ ಗೌರವʼ ಪದವಿ ಪ್ರದಾನ
Update: 2025-04-04 19:42 IST

ಹೊಸಪೇಟೆ, (ಹಂಪಿ) ವಿಜಯನಗರ : ಹಂಪಿ ಕನ್ನಡ ವಿಶ್ವವಿದ್ಯಾಲಯದ 33ನೇ ನುಡಿಹಬ್ಬ ಸಮಾರಂಭವು ಎ.4ರಂದು ವಿವಿ ಆವರಣದ ನವರಂಗ ಬಯಲು ರಂಗಮಂದಿರದಲ್ಲಿ ನಡೆಯಿತು.
ಈ ವೇಳೆ ಗಣನೀಯ ಸಾಧನೆ ಮಾಡಿದ ಮೂರು ಜನ ಗಣ್ಯರಿಗೆ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಟಿತ ಪದವಿ ನಾಡೋಜ ಗೌರವ ಪದವಿಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.
ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ಶಿವರಾಜ್ ವಿ.ಪಾಟೀಲ್, ಪ್ರಖ್ಯಾತ ಬರಹಗಾರರು ಮತ್ತು ಚಿಂತಕರಾದ ಕುಂ.ವೀರಭದ್ರಪ್ಪ (ಕುಂ.ವೀ) ಹಾಗೂ ಪ್ರಖ್ಯಾತ ಹಿಂದೂಸ್ತಾನಿ ಗಾಯಕರಾದ ಪದ್ಮಶ್ರೀ ಎಂ.ವೆಂಕಟೇಶ್ ಕುಮಾರ್ ಅವರಿಗೆ ನಾಡೋಜ ಗೌರವ ಪದವಿಯನ್ನು ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ತುಮಕೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ರಾಜಾಸಾಬ್ ಎಂ.ಎಚ್, ಹಂಪಿ ವಿವಿ ಕುಲಪತಿ ಡಾ.ಡಿ.ವಿ.ಪರಶಿವಮೂರ್ತಿ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.