ವಿಜಯನಗರ | ಎ.23 ರಂದು ಗುಳೇದ ಲಕ್ಕಮ್ಮದೇವಿ ಜಾತ್ರೆ : ಮದ್ಯ ಮಾರಾಟ ನಿಷೇಧ
Update: 2025-04-21 18:11 IST

ವಿಜಯನಗರ(ಹೊಸಪೇಟೆ) : ಕೂಡ್ಲಿಗಿ ತಾಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಎ.23 ರಂದು ಜರುಗಲಿರುವ ಗುಳೇದ ಲಕ್ಕಮ್ಮ ಜಾತ್ರೋತ್ಸವ ನಿಮಿತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 ರ ಅನ್ವಯ ಏ.22 ರ ಸಂಜೆ 6 ಗಂಟೆಯಿಂದ ಎ.24 ರ ಬೆಳಿಗ್ಗೆ 6 ಗಂಟೆವರೆಗೆ ಕೂಡ್ಲಿಗಿ ಪಟ್ಟಣದಲ್ಲಿ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಮದ್ಯದಂಗಡಿಯನ್ನು ಮುಚ್ಚುವಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.