ವಿಜಯನಗರ | ಎ.9 ರಿಂದ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಜನ ಸಂಪರ್ಕ ಸಭೆ

ವಿಜಯನಗರ(ಹೊಸಪೇಟೆ) : ಕರ್ನಾಟಕ ಲೋಕಾಯುಕ್ತ ಹೊಸಪೇಟೆ ಘಟಕದಿಂದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಎ.9 ರಿಂದ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿವೆ.
ಎ.9 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ರ ವರೆಗೆ ಹಡಗಲಿ ತಾಲೂಕು ಕಚೇರಿ ಸಭಾಂಗಣದಲ್ಲಿ, ಎ.16 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಹಗರಿಬೊಮ್ಮನಹಳ್ಳಿ ತಾಲೂಕು ಕಚೇರಿ ಸಭಾಂಗಣ, ಹಾಗೂ ಎ.22 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಹೊಸಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಜನಸಂಪರ್ಕ ಸಭೆಗಳು ನಡೆಯಲಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳು, ಅಹವಾಲುಗಳು ಹಾಗೂ ಸರ್ಕಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಕಚೇರಿಗಳಲ್ಲಿ ಅನಗತ್ಯ ವಿಳಂಬ, ಕಿರುಕುಳ, ತೊಂದರೆ ಮತ್ತು ಅಧಿಕಾರಿ ಸಿಬ್ಬಂದಿಯ ದುರಾಡಳಿತಕ್ಕೆ ಸಂಬಂಧಿಸಿದ ದೂರುಗಳನ್ನು ಆಯಾ ತಾಲೂಕುಗಳಲ್ಲಿ ನಿಗಧಿತ ದಿನಾಂಕದಂದು ದ್ವಿಪ್ರತಿಯಲ್ಲಿ ದೂರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಹೊಸಪೇಟೆ ಘಟಕದ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.