ವಿಜಯನಗರ | ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು
Update: 2025-04-29 22:34 IST

ವಿಜಯನಗರ(ಹೊಸಪೇಟೆ) : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 24 ವರ್ಷದ ವಿಜಯಕುಮಾರ ನಾಯ್ಕ್ ಎಂಬ ವ್ಯಕ್ತಿ ಕಾಣೆಯಾಗಿರುವ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ಚಹರೆ :
ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡುಮುಖ, 5.5 ಅಡಿ ಎತ್ತರ, ಕಪ್ಪು ಬಣ್ಣದ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿರುತ್ತಾನೆ. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ, ಕನ್ನಡ ಮತ್ತು ಲಂಬಾಣಿ ಭಾಷೆ ಮಾತನಾಡುತ್ತಾನೆ. ಎ.25 ರಂದು ಮನೆಯಿಂದ ಕಾಣೆಯಾಗಿದ್ದಾರೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹೊಸಹಳ್ಳಿ ಪೊಲೀಸ್ ಠಾಣೆ, ಇಮೇಲ್ hosahallivjn@gmail.com ಅಥವಾ ಮೊ.8971088858 ಗೆ ಮಾಹಿತಿ ನೀಡುವಂತೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.